ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನ ಮಳಲಿ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರ ಇದೀಗ ವಾಗ್ವಾದಕ್ಕೆ ಕಾರಣವಾಗಿದ್ದು, ಮಸೀದಿಯ ಒಂದು ಹಿಡಿ ಮರಳನ್ನು ಮರಳಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಎಸ್ ಡಿ ಪಿಐ ಸಂಘಟನೆ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ನಡೆದ ಜನಾಧಿಕಾರ ಸಮಾವೇಶದಲ್ಲಿ ಮಾತನಡಿದ ಅಬ್ದುಲ್ ಮಜೀದ್, ಮಳಲಿ ಮಸೀದಿಯಲ್ಲಿ ದೇವರ ಕುರುಹು ಪತ್ತೆ ವಿಚಾರವಾಗಿ ಹಿಂದೂ ಪರ ಸಂಘಟನೆಗಳು ತಾಂಬೂಲ ಪ್ರಶ್ನೆಗೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಮಾತನಾಡಿರುವ ಅಬ್ದುಲ್ ಮಜೀದ್, ಮಳಲಿ ಮಸೀದಿಯನ್ನು ಬಿಟ್ಟು ಕೊಡುತ್ತೇವೆ ಎಂಬ ಕನಸು ಕಾಣುವುದು ಬೇಡ. ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒಳಗೆ ಹಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯದ ಒಡೆದು ಹಾಕಿದ್ದರಲ್ಲ. ಸಂಘಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ ಎಂದು ಹೆಲಿದರು.
ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧವೂ ಕಿಡಿಕಾರಿರುವ ಅಬ್ದುಲ್ ಮಜೀದ್, ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡದಂತೆ ತಮ್ಮ ಶಾಸಕರಿಗೆ ಡಿಕೆಶಿ ತಾಕೀತು ಮಾಡಿದ್ದಾರೆ. ಇದನ್ನು ಗಮನಿಸಿದರೆ ಕಾಂಗ್ರೆಸ್ ಮುಸ್ಲಿಂ ಪರ ಅಲ್ಲ ಅನ್ನೋದನ್ನು ತಿಳಿದುಕೊಳ್ಳಿ ಎಂದು ಹೇಳಿದರು.
MES ಪುಂಡರಿಗೆ ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ