ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಪೀತ ಪತ್ರಿಕೋದ್ಯಮ ಇಂದು ಸಂಪೂರ್ಣ ಸ್ಥಗಿತವಾಗಿದೆ. ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮೂರು ವರ್ಷಗಳ ಮುನ್ನೋಟ ಮತ್ತು ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಬೆಳಗಾವಿಯಲ್ಲಿ ಭಾನುವಾರ ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಾಮಾಜಿಕ ನ್ಯಾಯ ನೀಡುವ, ಅಭಿವೃದ್ಧಿಗೆ ಪ್ರೋತ್ಸಾಹಿಸುವ, ಗತವೈಭವ ತಿಳಿಸುವ ಕೆಲಸವಾಗಲಿ. ಬದಲಾದ ಜೀವನ ಶೈಲಿಯಲ್ಲಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಅವರು ಹೇಳಿದರು.
ದೀನ ದಲಿತರನ್ನು ಮುಖ್ಯ ವಾಹಿನಿಗೆ ತರಲು ಪತ್ರಕರ್ತರೂ ಆಗಿದ್ದ ಮಹಾತ್ಮಾ ಗಾಂಧಿಯವರು ಪತ್ರಿಕೆಯ ಮೂಲಕ ಪ್ರಯತ್ನ ಮಾಡಿದ್ದರು. ಜನರನ್ನು ಜಾಗ್ರತಗೊಳಿಸುವ ಕೆಲಸವನ್ನು ಪತ್ರಕರ್ತರಾಗಿ ಡಾ.ಬಿ.ಆರ್.ಅಂಬೇಡ್ಕರ್ ಮಾಡಿದ್ದರು ಎಂದು
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ಉಮಾ ಮಹೇಶ ವೈದ್ಯ ವಿರಚಿತ ಮಾಧ್ಯಮದವರೆ ಈ ಕಾನೂನುಗಳ ಅರಿವಿರಲಿ ಪುಸ್ತಕ ಬಿಡುಗಡೆಯಾಯಿತು.
ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ, ಪತ್ರಕರ್ತ ಎಚ್.ಬಿ. ಮದನಗೌಡರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಅಧ್ಯಕ್ಷ ದಿಲೀಪ ಕುರಂದವಾಡೆ , ಲೇಖಕಿ ಉಮಾ ಮಹೇಶ ವೈದ್ಯ ಉಪಸ್ಥಿತರಿದ್ದರು.
ರಾಜ್ಯ ಘಟಕದ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಅಜ್ಜಮಾಡ ರಮೇಶ ಕುಟ್ಟಪ್ಪ, ಭವಾನಿಸಿಂಗ್ ಎಂ. ಠಾಕೂರ, ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್, ಸೋಮಶೇಖರ ಕೆರಗೋಡು ಹಾಗೂ ನಿಂಗಪ್ಪ ಚಾವಡಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದಾರೆ. ದಿಲೀಪ ಕುರಂದವಾಡೆ ಆಶಯ ಭಾಷಣ ಮಾಡಿದರು.
ನವೀತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ