Latest

ವಾಡಿಕೆಗೂ ಮೊದಲೇ ಮುಂಗಾರು ಆರಂಭ; ರಾಜ್ಯದಲ್ಲಿಯೂ ಇಂದಿನಿಂದ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯದಲ್ಲಿಯೂ ಇಂದಿನಿಂದ ಮಳೆ ಆರಂಭವಾಗಲಿದೆ. ಮುಂದಿನ ಮೂರು ದಿನಗಳಲ್ಲಿ ಕೇರಳ ಹಾಗೂ ಮಾಹೆ ಲಕ್ಷದ್ವೀಪದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಹಾಗೂ ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಕೇರಳಕ್ಕೆ ವಾಡಿಕೆಗಿಂತ ಮೂರು ದಿನ ಮೊದಲು ಮುಂಗಾರು ಪ್ರವೇಶಿಸಿದ್ದು, ಮುಂದಿನ 3-4 ದಿನಗಳ ಕಾಲ ತಮಿಳುನಾಡು, ಕೇರಳ, ಕರ್ನಾಟಕದ ಕೆಲ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗುರುವಾರದವರೆಗೆ ಕೇರಳದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಜೂನ್ ಮೊದಲ ವಾರದಲ್ಲಿ ಮಾನ್ಸೂನ್ ಆರಂಭವಾಗಲಿದ್ದು, ರಾಜ್ಯಾದ್ಯಂತ ಮಳೆಯಾಗಲಿದೆ.

ಇನ್ನು ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮಬಂಗಾಳ, ಸಿಕ್ಕಿಂ ನಲ್ಲಿ ಮುಂದಿನ ಮೂರು ದಿನಗಳ ಗಾಲ ಭಾರಿ ಮಳೆಯಾಗಲಿದೆ. ಉತ್ತರಾಖಂಡದ ಹಲವೆಡೆಗಳಲ್ಲಿ ಹಗುರ ಮಳೆ, ಉತ್ತರ ಕಾಶಿ, ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ ಪಿಥೋರಗಢಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಜನೀಶ್ ಗೋಯಲ್ ಸೇರಿದಂತೆ 11 IAS ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button