ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಪ್ರೀತಿಸಿದ ಯುವತಿ ವಂಚಿಸಿದ ಕಾರಣಕ್ಕೆ ಮನನೊಂದ ಯುವಕ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುತ್ತಿನಕೊಪ್ಪದ ಶಂಕರಪುರದಲ್ಲಿ ನಡೆದಿದೆ.
31 ವರ್ಷದ ಚೇತನ್ ಆತ್ಮಹತ್ಯೆಗೆ ಶರಣಾದ ಯುವಕ. ನಾನು ಗಾನವಿ ಎಂಬ ಯುವತಿಯನ್ನು ಪ್ರೀತಿಸಿದ್ದು ಆಕೆ ನನಗೆ ಮೋಸ ಮಾಡಿದ್ದಾಳೆ ಈಗ ಮದುವೆಗೆ ನಿರಾಕರಿಸಿದ್ದಾಳೆ. ಕಳೆದ 9 ವರ್ಷಗಳಿಂದ ನಾವಿಬ್ಬರೂ ಪರಸ್ಪರ ಪ್ರೀತಿಸಿದ್ದೆವು. ಲಕ್ಷಾಂತರ ರೂಪಾಯಿ ಹಣವನ್ನೂ ಕೂಡ ನನ್ನಿಂದ ಗಾನವಿ ಪಡೆದುಕೊಂಡಿದ್ದಾಳೆ. ಆದರೆ ಈಗ ಮದುವೆಗೆ ಒಲ್ಲೆ ಎಂದಿದ್ದಾಳೆ ಎಂದು ಸಂಬಂಧಿಕರಿಗೆ ವಾಯ್ಸ್ ಮೆಸೇಜ್ ಕಳುಹಿಸಿರುವ ಚೇತನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಕೂಡ ಬರೆದಿರುವ ಚೇತನ್, ನನ್ನ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಯುವತಿಯೇ ಬಂದು ನನ್ನ ಚಿತೆಗೆ ಬೆಂಕಿಯಿಡಬೇಕು. ಆಕೆಗೆ ಶಿಕ್ಷೆಯಾಗಬೇಕು. ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಆರೋಪಿಸಿದ್ದಾನೆ.
ಚಿಕ್ಕಮಗಳೂರಿನ ಎನ್.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪಿಎಸ್ ಐ ಅಕ್ರಮ; ಎಸ್ಕೇಪ್ ಆಗಿದ್ದ ಶಾಂತಾಬಾಯಿ ಅರೆಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ