Latest

RSS ಬೈಯ್ಯದಿದ್ದರೆ ತಿಂದಿದ್ದು ಕರಗಲ್ಲವೇ; ಕಾಂಗ್ರೆಸ್ ನಾಯಕರ ವಿರುದ್ಧ ಶೆಟ್ಟರ್ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ; ಕಾರವಾರ: ಆರ್.ಎಸ್.ಎಸ್ ಗೆ ಬೈಯ್ಯದೆ ಇದ್ದರೆ ಕಾಂಗ್ರೆಸ್ ನಾಯಕರಿಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಆರ್ ಎಸ್ ಎಸ್ ಮೂಲ ಕೆದಕಿದ ಬಗ್ಗೆ ಕಾರವಾರದಲ್ಲಿ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ಆರ್ ಎಸ್ ಎಸ್, ಬಿಜೆಪಿಯನ್ನು ಬೈದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದು ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಸಿದ್ದರಾಮಯ್ಯ ತಾವು ನೀಡಿದ ಹೇಳಿಕೆಗಳಿಂದ ದೊಡ್ಡವರಾಗಲ್ಲ, ಇನ್ನೂ ಸಣ್ಣವರಾಗುತ್ತಾರೆ ಎಂದು ಹೇಳಿದರು.

ಪಂಜಾಬ್ ನಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಕೈಕೊಟ್ಟಿದ್ದಾರೆ. ಉತ್ತರ ಪ್ರದೇಶದಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ನತ್ತ ತಿರುಗಿಯೂ ನೋಡುತ್ತಿಲ್ಲ. ಹಿಂದೂ ಸಂಘಟನೆಗಳ ಜತೆಗೆ ಇಡೀ ದೇಶವನ್ನು ಒಗ್ಗೂಡಿಸುವ ಕೆಲಸವನ್ನು ಆರ್ ಎಸ್ ಎಸ್ ಮಾಡುತ್ತಿದೆ. ಆರ್ ಎಸ್ ಎಸ್ ಒಂದು ಶಕ್ತಿ. ಅದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ. ಲಕ್ಷಾಂತರ ಕಾರ್ಯಕರ್ತರ ಪಡೆ ಆರ್ ಎಸ್ ಎಸ್ ಗೆ ಇದೆ. ಆರ್ ಎಸ್ ಎಸ್ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡುವುದನ್ನು ಸಿದ್ದರಾಮಯ್ಯ ಬಿಡಲಿ ಎಂದು ಹೇಳಿದರು.
ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

Home add -Advt

Related Articles

Back to top button