ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಮತ್ತೆ ಹಿಜಾಬ್ ವಿವಾದ ಆರಂಭವಾಗಿದ್ದು, ಕೋರ್ಟ್ ಆದೇಶಕ್ಕೂ ಕಿವಿಗೊಡದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಕಾಲೇಜು ಆದಳಿತ ಮಂದಳಿ ಸೂಚನೆ ಹೊರತಾಗಿಯೂ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ 6 ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಮಾನತುಗೊಳಿಸಿದೆ.
ಹಲವು ಬಾರಿ ಕಾಲೇಜು ಸೂಚಿಸಿದರೂ ವಿದ್ಯಾರ್ಥಿನಿಯರು ಮತ್ತೆ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪನ್ಯಾಸಕರ ಸಭೆ ನಡೆಸಿ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲು ಸಭೆಯಲ್ಲಿ ನಿರ್ಧರಿಸಿದ್ದು, ಅದರಂತೆ ಆದೇಶ ಹೊರಡಿಸಲಾಗಿದೆ.
ಲಂಚ: ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತರ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ