ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತರಿಂದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಮರ್ಸಿಡೀಸ್ ಕಾರಿನಲ್ಲಿ 17 ವರ್ಷದ ಬಾಲಕಿ ಮೇಲೆ ಶಾಸಕನ ಪುತ್ರ ಸೇರಿ ಪ್ರಭಾವಿ ಕುಟುಂಬದ ಐವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಹೈದರಾಬಾದ್ ನ ಜುಬಿಲಿ ಹಿಲ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಪೊಲೀಸ್ ಅಧಿಕಾರಿ ಜೋಯಲ್ ಡೇವಿಲ್ ಮಾಹಿತಿ ನೀಡಿದ್ದು, ಆರೋಪಿಗಳ ಬಗ್ಗೆ ಸಂತ್ರಸ್ತೆ ಏನನ್ನೂ ಬಹಿರಂಗಪಡಿಸಿಲ್ಲ. ಆದರೆ ಒಬ್ಬನ ಹೆಸರನ್ನು ಮಾತ್ರ ತಿಳಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಸಿಸಿಟಿವಿ ದೃಶ್ಯಾವಳಿ ಪ್ರಕಾರ 5 ಆರೋಪಿಗಳನ್ನು ಬಗ್ಗೆ ಪತ್ತೆ ಹಚ್ಚಲಾಗಿದೆ. ಸಧ್ಯಕ್ಕೆ ಸಂತ್ರಸ್ತೆ ಯಾರನ್ನೂ ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಶಂಕಿತ ಆರೋಪಿಗಳು ಪಬ್ ಹೊರಗೆ ಪ್ರಪ್ರಾಪ್ತೆಯೊಂದಿಗೆ ನಿಂತಿದ್ದರು. ಬಳಿಕ ಆಕೆಯನ್ನು ಮನೆಗೆ ಬಿಡಲು ಮುಂದಾಗಿದ್ದಾರೆ. ಆಕೆ ಕಾರಿನ ಬಳಿ ಹೋಗುತ್ತಿದ್ದಂತೆ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಆರೋಪಿಗಳು ಕಾರಿನೊಳಗೆ ಆಕೆಯ ಮೇಲೆ ಸರದಿಯಲ್ಲಿ ಅತ್ಯಾಚಾರ ನಡೆಸಿದ್ದಾರೆ. ಇತರರು ಕಾರಿನ ಹೊರಗೆ ಕಾವಲು ನಿಂತಿರುವುದು ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು: ಬಿಜೆಪಿ ಮುಖಂಡನ ಹತ್ಯೆಗೆ ಯತ್ನ; ಇಬ್ಬರು ಇಂಜಿನಿಯರ್ ಗಳು ಸಸ್ಪೆಂಡ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ