
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರವಾದಿ ಮೊಹಮ್ಮದ್ ಹಾಗೂ ಅವರ ಪತ್ನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ.
ಈ ಕುರಿತು ಬಿಜೆಪಿ ಶಿಸ್ತು ಪಾಲನಾ ಸಮಿತಿ ಕಾರ್ಯದರ್ಶಿ ಓಂ ಪಾಠಕ್ ಮಾಹಿತಿ ನೀಡಿದ್ದು, ಪಕ್ಷದ ಶಿಸ್ತಿನ ವಿರುದ್ಧ ನಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಪುಣೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನೂಪುರ್ ಶರ್ಮಾ, ಪ್ರವಾದಿ ಮೊಹಮ್ಮದ್ ಹಾಗೂ ಅವರ ಪತ್ನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಪುಣೆ ಮಾಜಿ ಕಾರ್ಪೊರೇಟರ್ ಅಬ್ದುಲ್ ಗಫೂರ್ ಕೊಂಡ್ವಾ ಪೊಲೀಸ್ ಠಾಣೆಯಲ್ಲಿ ನೂಪುರ್ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ, ಉಪಾಧ್ಯಕ್ಷರಾಗಿ ಭಾಸ್ಕರ್ ರಾವ್ ನೇಮಕ