ಪ್ರಗತಿವಾಹಿನಿ ಸುದ್ದಿ, ಯಲ್ಲಾಪುರ: ಆಕಸ್ಮಿಕ ಬೆಂಕಿ ಹೊತ್ತಿ ನಡು ರಸ್ತೆಯಲ್ಲಿ ಮ್ಯಾಂಗನೀಸ್ ಲಾರಿಯೊಂದು ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ರಾಷ್ಟ್ರೀಯ ಹೆದ್ದಾರ 66 ರಲ್ಲಿ ನಡೆದಿದೆ.
ಹೊಸಪೇಟೆಯಿಂದ ಗೋವಾಕ್ಕೆ ಮ್ಯಾಂಗನೀಸ್ ಹೊತ್ತು ತೆರಳುತ್ತಿದ್ದ ಲಾರಿ ಇದಾಗಿದ್ದು ಬೆಂಕಿಯಿಂದ ಅರಬೈಲ್ ಘಾಟ್‌ನಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ