ಪ್ರಗತಿವಾಹಿನಿ ಸುದ್ದಿ; ರಾಯಚೂರು; ಕಲುಷಿತ ಕುಡಿಯುವ ನೀರು ಸೇವಿಸಿ ರಾಯಚೂರಿನ ರಾಂಪುರದಲ್ಲಿ ಮೂವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ.
ಮಲ್ಲಮ್ಮ, ಅಬ್ದುಲ್ ಗಫುರ್ ಹಾಗೂ ಮೊಹಮ್ಮದ್ ನೂರ್ ಎಂಬ ಮೂವರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ಹಲವರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಪ್ರಕರಣ ಬೇಸರ ತಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ನೀರಿನ ಮಾದರಿ ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಣ್ದರು.
ಇನ್ನು ಮೃತ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ನೀಡಲಾಗುವುದು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವವರ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ