ಪ್ರಗತಿವಾಹಿನಿ ಸುದ್ದಿ; ನವದೆಹಲಿ: 400 ಜ್ಯೂನಿಯರ್ ಎಕ್ಸಿಕೂಟಿವ್ ಹುದ್ದೆಗಳಿಗೆ ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದೆ. ಆಸಿಡ್ ದಾಳಿ ಸಂತ್ರಸ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಭೌತಶಾಸ್ತ್ರ ಹಾಗೂ ಗಣಿತ ವಿಜ್ಞಾನ ವಿಷಯದಲ್ಲಿ ಮೂರು ವರ್ಷಗಳ ಬಿಎಸ್ ಸಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಯಾವುದೇ ವಿಭಾಗದಲ್ಲಿ ಎಂಜಿನಿಯರಿಂಗ್ ನಲ್ಲಿ ಪೂರ್ಣ ಸಮಯದ ನಿಯಮಿತ-ಭೌತಶಾಸ್ತ್ರ ಮತ್ತು ಗಣಿತ ವಿಷಯ ಯಾವುದಾದರೂ ಒಂದು ಸೆಮಿಸ್ಟರ್ ಪಠ್ಯಕ್ರಮದಲ್ಲಿ ವಿಷಯಗಳನ್ನಾಗಿ ಪಡೆದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನೋಂದಣಿ ಪ್ರಕ್ರಿಯೆ ಜೂನ್ 15ರಿಂದ ಆರಂಭವಾಗಲಿದ್ದು, ಜುಲೈ 14 ಅರ್ಜಿ ಸಲ್ಲಿಕೆಗೆ ಕೊನೆ ದಿನ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಧ್ವನಿ ಪರೀಕ್ಷೆ ಹಾಗೂ ಹಿನ್ನೆಲೆ ಪರಿಶೀಲನೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ AAI ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಬೆಳಗಾವಿ ಸೇರಿದಂತೆ ಹಲವೆಡೆ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ