ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲ ದಿನಗಳ ಹಿಂದೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಕೋವಿಡ್ ಸಮಸ್ಯೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸೋನಿಯಾ ಗಾಂಧಿ, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ನಿಗಾ ವಹಿಸಿದೆ.
ಈ ಕುರಿತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮಾಹಿತಿ ನೀಡಿದ್ದು, ಕೋವಿಡ್ ಸಂಬಂಧಿತ ಅನಾರೋಗ್ಯದಿಂದಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾಗಿ ತಿಳಿಸಿದ್ದಾರೆ.
ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸ್ಕೆಚ್? ಗೃಹ ಸಚಿವರಿಗೆ ದೂರು ನೀಡಿದ ಜಯ ಕರ್ನಾಟಕ ಸಂಘಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ