ವಿಧಾನ ಪರಿಷತ್ ಪದವಿಧರ-ಶಿಕ್ಷಕರ ಕ್ಷೇತ್ರ ಚುನಾವಣೆ; ಹಕ್ಕು ಚಲಾಯಿಸಲು ಸರತಿ ಸಾಲಿನಲ್ಲಿ ನಿಂತ ಮತದಾರರು
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಆರಂಭವಾಗಿದೆ.
ಬೆಳಿಗ್ಗೆ 8ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೂ ನಡೆಯಲಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮೂರು ಪಕ್ಷಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ವಾಯವ್ಯ ಪದವೀಧರರು ಹಾಗೂ ಶಿಕ್ಷಕರ ಮತಕ್ಷೇತ್ರಗಳ ಮತದಾನಕ್ಕಾಗಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆ ಸಂಖ್ಯೆ 28 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಚಲಾಯಿಸಿರುವ ದೃಶ್ಯ ಕಂಡುಬಂತು.
ಬೆಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರ ದಾಳಿ; ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ 30 ಜನರು ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ