ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸೋಮವಾರ ನಡೆಯುತ್ತಿರುವ ವಿಧಾನ ಪರಿಷತ್ತಿನ ಚುನಾವಣೆಯ 4 ಗಂಟೆಯವರೆಗಿನ ಮತದಾನದ ವಿವರ ಲಭ್ಯವಾಗಿದೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 4 ಗಂಟೆಯವರೆಗೆ ಶೇ. 81.11 ರಷ್ಟು ಮತ ಚಲಾವಣೆಯಾಗಿದೆ.
ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ 4 ಗಂಟೆಯವರೆಗೆ 77.70ರಷ್ಟು ಹಾಗೂ ವಾಯವ್ಯ ಪದವೀಧರ ಕ್ಷೇತ್ರದಲ್ಲಿ 57.85ರಷ್ಟು ಮತದಾನವಾಗಿದೆ.
ಎಲ್ಲ ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗಿದ್ದು ಎಲ್ಲೂ ಅಹಿತಕರ ಘಟನೆ ನಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.
5 ಗಂಟೆಗೆ ಮತದಾನ ಮುಕ್ತಾಯವಾಗಿದ್ದು, ಅಂತಿಮ ಮತದಾನ ಪ್ರಮಾಣ ಇನ್ನಷ್ಟೆ ಬರಬೇಕಿದೆ.
ವಿಧಾನ ಪರಿಷತ್ ಪದವಿಧರ-ಶಿಕ್ಷಕರ ಕ್ಷೇತ್ರ ಚುನಾವಣೆ; ಹಕ್ಕು ಚಲಾಯಿಸಲು ಸರತಿ ಸಾಲಿನಲ್ಲಿ ನಿಂತ ಮತದಾರರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ