ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಜ್ಞಾನ ಮತ್ತು ತಂತ್ರಜ್ಞಾನ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುತ್ತಿದ್ದು, ಕಳೆದ 2 ದಶಕಗಳಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದೆ. ರಕ್ತದಲ್ಲಿರುವ ವಿವಿಧ ಉತ್ಪನ್ನಗಳನ್ನು ಬೇರ್ಪಡಿಸಿ ರೋಗಿಗೆ ಅವಶ್ಯವಿರುವ ರಕ್ತದ ಉತ್ಪನ್ನ ಮಾತ್ರ ನೀಡಲು ಸಹಕಾರಿಯಾಗಿದೆ. ಅತ್ಯಂತ ಕಠಿಣ ಮತ್ತು ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ತೀವ್ರವಾಗಿರುತ್ತದೆ. ಆದ್ದರಿಂದ ದಾನಿಗಳು ರಕ್ತವನ್ನು ನೀಡಲು ಮುಂದೆ ಬರಬೇಕು ಎಂದು ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಅವರಿಂದಿಲ್ಲಿ ಹೇಳಿದರು.
ಕೆಎಲ್ಇ ಸಂಸ್ಥೆಯ ಡಾ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಎನ್ಎಸ್ಎಸ್ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಒಂದು ಶಸ್ತ್ರಚಿಕಿತ್ಸೆ ನೆರವೇರಬೇಕಾದರೆ ರಕ್ತವು ಅತ್ಯವಶ್ಯವಾಗಿ ಬೇಕು. ಯುವಕರು ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚರ್ಯರಾದ ಡಾ. ಎನ್ ಎಸ್ ಮಹಾಂತಶೆಟ್ಟಿ ಅವರು ಮಾತನಾಡಿ, ಹೆರಿಗೆ ಸಂದರ್ಭದಲ್ಲಂತೂ ಮಹಿಳೆಯರಿಗೆ ರಕ್ತದ ಅವಶ್ಯಕತೆ ತೀವ್ರವಾಗಿರುತ್ತದೆ. ಕೆಲವು ಮಕ್ಕಳಲ್ಲಿ ರಕ್ತದ ಉತ್ಪಾದನೆಯಾಗುವುದಿಲ್ಲ. ಅಂತ ಮಕ್ಕಳಿಗೆ ನಿರಂತರವಾಗಿ ರಕ್ತ ನೀಡಬೇಕಾಗುತ್ತದೆ. ಆದ್ದರಿಂದ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಸಮದಾಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ತೀವ್ರವಾಗಿರುತ್ತದೆ. ಅಗತ್ಯಕ್ಕೆ ತಂಕ್ಕಂತೆ ರಕ್ತದ ಲಭ್ಯತೆ ಇಲದಿದ್ದಾಗ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಕರೆ ನೀಡಿದರು.
ರೆಡಕ್ರಾಸ್ ಸಂಸ್ಥೆಯ ಅಶೋಕ ಬದಾಮಿ ಹಾಗೂ ಡಾ. ಅವಿನಾಶ ಕವಿ ಮಾತನಾಡಿದರು. 20 ವರ್ಷಗಳಿಂದ ರಕ್ತದಾನ ಮಾಡುತ್ತ ಜೀವ ರಕ್ಷಣೆಯ ಕಾರ್ಯದಲ್ಲಿ ತೊಡಗಿ 50 ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ಕಿಶೋರ ಚೌಧರಿ ಅವರನ್ನು ಸತ್ಕರಿಸಲಾಯಿತು. ಸುಮಾರು 75ಕ್ಕೂ ಅಧಿಕ ಜನರು ಇಂದು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ರಕ್ತ ಭಂಡಾರದ ಮುಖ್ಯಸ್ಥರಾದ ಡಾ. ಎಸ್ ವಿ ವಿರಗಿ, ಡಾ. ಬಿ ಎನ್ ಮಿಸಾಳೆ, ಡಾ. ವಿನೋದಿ ಶರ್ಮಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಗೋವಿಂದ್ ಕಾರಜೋಳ ಏನು ಎಳೆ ಎತ್ತಾ? – ಪ್ರಕಾಶ ಹುಕ್ಕೇರಿಗೆ ಮುದಿ ಎತ್ತು ಎಂದವರಿಗೆ ಲಕ್ಷ್ಮೀ ಹೆಬ್ಬಾಳಕರ್ ಬರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ