ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ನೂತನ ಲೋಕಾಯುಕ್ತರ ನೇಮಕಕ್ಕೆ ರಾಜ್ಯ ಸರ್ಕಾರದ ಶಿಫಾರಸಿಗೆ ರಾಜ್ಯಪಾಲ ಗೆಹ್ಲೋಟ್ ಅಂಕಿತ ಹಾಕಿದ್ದು ಪ್ರಸ್ತುತ ಉಪ ಲೋಕಾಯುಕ್ತರಾಗಿರುವ ಬಿ.ಎಸ್.ಪಾಟೀಲ್ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.
ನಾಳೆ 9:45ಕ್ಕೆ ರಾಜಭವನದಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಬಿ.ಎಸ್.ಪಾಟೀಲ್ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ಬಿ.ಎಸ್.ಪಾಟೀಲ್ ನೇಮಕಗೊಂಡಿದ್ದು, 8ನೇ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿದ್ದಾರೆ. ಕಳೆದ ಐದು ತಿಂಗಳಿಂದ ಲೋಕಾಯುಕ್ತ ಹುದ್ದೆ ಖಾಲಿಯಿತ್ತು.
ವಟ ಸಾವಿತ್ರಿ ವ್ರತ ಮಾಡಿ ಆಲದ ಮರಕ್ಕೆ ಪೂಜೆ ಸಲ್ಲಿಸಿದ ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ