Latest

ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ತನ್ನ ಮೂವರು ಮಕ್ಕಳೊಂದಿಗೆ ತಾಯಿಯೊಬ್ಬರು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ನಡೆದಿದೆ.

27 ವರ್ಷದ ಪಿಂಟು ಜಾಧವ್ ಹಾಗೂ ಮಕ್ಕಳಾದ 6 ವರ್ಷದ ಪ್ರವೀಣ, 4 ವರ್ಷದ ಸುದೀಪ ಹಾಗೂ 2 ವರ್ಷದ ಮಮದಿಕಾ ಮೃತರು.

ಮಹಿಳೆ ತನ್ನ ಮೂವರು ಮಕ್ಕಳನ್ನು ಕೃಷಿ ಹೊಂಡಕ್ಕೆ ಎಸೆದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದಿನಿಂದ CET ಪರೀಕ್ಷೆ ; ಹಿಜಾಬ್ ಗೆ ನೋ ಎಂಟ್ರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button