ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಇಡಿ ವಿಚಾರಣೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ರಾಜಭವನ ಚಲೋ ನಡೆಸುತ್ತಿದ್ದು, ಕಾರ್ಯಕರ್ತರಿಗೆ ರಾಜಭವನ ಮುತ್ತಿಗೆ ಹಾಕಲು ಕರೆ ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಹರಿಪ್ರಸಾದ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ರಾಜಭವನ ಚಲೋ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರ ರಾಜಭವನ ಚಲೋ ವಿರುದ್ಧ ಕಿಡಿಕಾರಿರುವ ಸಚಿವ ಸುಧಾಕರ್, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪ್ರತಿಭಟನೆಗಳನ್ನು ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚಾದರೆ ಕಾಂಗ್ರೆಸ್ ನವರೆ ಹೊಣೆ. ಅವರು ಪ್ರತಿಭಟನೆಗಳನ್ನು ಮಾಡಲಿ ನಾವು ಪ್ರಕರಣ ದಾಖಲಿಸುತ್ತೇವೆ ಎಂದು ಹೇಳಿದರು.
ಈ ಹಿಂದೆ ಪಿ.ವಿ.ನರಸಿಂಹ ರಾವ್, ಯೆಚೂರಿಯವರನ್ನು ಇಡಿ ವಿಚಾರಣೆ ನಡೆಸಿತ್ತು. ಖರ್ಗೆಯವರನ್ನೂ ವಿಚಾರಣೆ ನಡೆಸಿತ್ತು. ಆಗ ಯಾರೂ ಪ್ರತಿಭಟನೆ ಮಾಡಲಿಲ್ಲ. ಈಗ ರಾಹುಲ್ ಗಾಂಧಿ ವಿಚಾರಣೆ ನಡೆಸಿದರೆ ಪ್ರತಿಭಟನೆ ಮಾಡುತ್ತಿರುವುದು ಯಾಕೆ? ಒಂದು ಕಡೆ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಇನ್ನೊಂದು ಕಡೆ ಸಂವಿಧಾನಕ್ಕೆ ಅಗೌರವ ತೋರುತ್ತಾರೆ. ಕಾಂಗ್ರೆಸ್ ನಾಯಕರ ನಡೆ ನಾಚಿಕೆ ತರಿಸುವಂತದ್ದು ಎಂದು ವಾಗ್ದಾಳಿ ನಡೆಸಿದರು.
ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ