ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಎಲ್ಲರೂ ಖಂಡಿಸಬೇಕಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹೋರಾಟ ನಡೆಸಲಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ತನಿಖೆಯ ಹೆಸರಲ್ಲಿ ಕಾಂಗ್ರೆಸ್ ನವರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಕಚೇರಿಗೆ ಹೋಗಲು ನಮಗೆ ಅವಕಾಶ ನೀಡುತ್ತಿಲ್ಲ. ಎಐಸಿಸಿ ಕಚೇರಿಯನ್ನು ಪೊಲೀಸರು ಆಕ್ರಮಿಸಿಕೊಂಡಿದ್ದಾರೆ. ಅಲ್ಲಿದ್ದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಇದಕ್ಕಿಂತ ನೀಚ ಕೆಲಸ ಮತ್ತೊಂದಿಲ್ಲ. ಹೀಗೆ ಮುಂದುವರೆಯಲು ಬಿಟ್ಟರೆ ಬಿಜೆಪಿಯವರು ಸಮಾಜವನ್ನು ಹಾಳು ಮಾಡುತ್ತಾರೆ. ಬಿಜೆಪಿಯೇತರ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ಕೇಂದ್ರ ಸರ್ಕಾರ ಸಂವಿಧಾನ, ಕಾನೂನಿಗೆ ಬೆಲೆ ಕೊಡುತ್ತಿಲ್ಲ, ಪ್ರಜಾಪ್ರಭುತ್ವವನ್ನು ಹತ್ಯೆ ಮಾಡುತ್ತಿದ್ದಾರೆ. ಇದರ ವಿರುದ್ಧ ಧ್ವನಿ ಎತ್ತುತ್ತಿರುವ ಕಾಂಗ್ರೆಸ್ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಕಿಡಿಕಾರಿದರು.
ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಕೇಸ್ ಹಾಕಿದ್ದಾರೆ. ಇಡಿಯಿಂದ ಅನಗತ್ಯವಾಗಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಹೆಸರಲ್ಲಿ ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಸರ್ವಾಧಿಕಾರಿ ಧೋರಣೆ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಆದರೆ ಹೋರಾಟ, ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು. ಆದರೆ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಸರ್ಕಾರದ ಈ ಕ್ರಮ ಖಂಡನೀಯ ಎಂದು ವಾಗ್ದಾಳಿ ನಡೆಸಿದರು.
ನಡು ರಸ್ತೆಯಲ್ಲೇ ಕುಳಿತ ಮಾಜಿ ಸಿಎಂ; ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ