Latest

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಕಿಡ್ನಾಪ್!

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಅಪಹರಿಸಿರುವ ಘಟನೆ ರಾಯಚೂರಿನ ಲಿಂಗಸುಗೂರಿನಲ್ಲಿ ಬೆಳಕಿಗೆ ಬಂದಿದೆ.

ಲಿಂಗಸುಗೂರಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಮರೇಶ್ ಮೇಟಿ ಎಂಬುವವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಒತ್ತಾಯಪೂರ್ವಕವಾಗಿ ಅಮರೇಶ್ ಅವರಿಂದ ರಾಜೀನಾಮೆ ಕೊಡಿಸಲಾಗಿತ್ತು ಎಂದು ತಿಳಿದುಬಂದಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಲಾಡ್ಜ್ ನಿಂದ ಅಮರೇಶ್ ಅವರನ್ನು ಕಿಡ್ನ್ಯಾಪ್ ಮಾಡಲಾಗಿದೆ. ಈ ಕುರಿತು ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ಪುಟ್ಟ ಮಕ್ಕಳನ್ನು ಬಾವಿಗೆ ತಳ್ಳಿ ಸಾಹಿಸಿದ ತಂದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button