ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಅಂಚಿಗೆ ತಲುಪಿದೆ. ಈ ಮಧ್ಯೆ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಸಚಿವ ಏಕನಾಥ್ ಶಿಂಧೆ ಸಿಎಂ ಉದ್ಧವ್ ಠಾಕ್ರೆಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ನಮಗೆ ಶಿವಸೇನೆಯ 40 ಶಾಸಕರ ಬೆಂಬಲವಿದೆ. ನಾವು ಬಾಳಾ ಠಾಕ್ರೆಯ ಸೈನಿಕರು. ನಮ್ಮದು ಹಿಂದೂತ್ವ ಆಧಾರದ ಮೇಲೆ ಮೈತ್ರಿ ರಚನೆ. ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿಗೆ ನಮ್ಮ ವಿರೋಧವಿದೆ. ಈ ವಿಚಾರದಲ್ಲಿ ನಮ್ಮ ನಿಲುವು ಅಚಲ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿ ಜತೆ ಸರ್ಕಾರ ರಚನೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇನೆ ಎಂದು ಹೇಳಿದ್ದಾರೆ. ಒಟ್ಟಾರೆ ಏಕನಾಥ್ ಶಿಂಧೆ ಹಾಗೂ ಟೀಂ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ