Latest

ವಿದ್ಯಾರ್ಥಿನಿಯರ ಜತೆ ಶಿಕ್ಷಕನ ಅಸಭ್ಯವರ್ತನೆ; ಕಾಮುಕ ಟೀಚರ್ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಸತಿ ಶಾಲೆ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದು, ಕಾಮುಕ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಶಾಲೆಯಲ್ಲಿ ನಡೆದಿದೆ.

ಕ್ಲಾಸಿನಲ್ಲಿ ಶಿಕ್ಷಕ ದೊರೆಸ್ವಾಮಿ, ಕುತ್ತಿಗೆಯಲ್ಲಿದ್ದ ಚೈನ್ ಅಲರ್ಜಿಯಾಗುತ್ತೆ ತೆಗೆಯಿರಿ ಎಂದು ಹತ್ತಿರಕ್ಕೆ ಬಂದು ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ. ಕಾಮುಕ ಶಿಕ್ಷಕನ ಕಾಟಕ್ಕೆ ಬೇಸತ್ತ ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

Home add -Advt

ನಿನ್ನೆರಾತ್ರಿ ಹಾಗೂ ಇಂದು ಊಟ, ಉಪಹಾರ ಸೇವಿಸದೇ ವಿದ್ಯಾರ್ಥಿಗಳು ಧರಣಿ ನಡೆಸಿ ಅಸ್ವಸ್ಥರಾಗುತ್ತಿದ್ದಂತೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೆಚ್.ಡಿ.ಕೋಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಸಿಒ ಪ್ರಭಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಶಿಕ್ಷಕ ದೊರೆಸ್ವಾಮಿಯನ್ನು ವಜಾ ಮಾಡಿದ್ದಾರೆ.
ನೂಪುರ್ ಶರ್ಮಾ ಬೆಂಬಲಿಸಿದ್ದ ಮತ್ತೋರ್ವ ವ್ಯಕ್ತಿ ಬರ್ಬರ ಹತ್ಯೆ

Related Articles

Back to top button