ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರದಲ್ಲಿ ಇಳಿಕೆ ಮಾಡಲಾಗಿದೆ. ಜುಲೈ 1ರಿಂದಲೇ ಪರಿಷ್ಕೃತ ದರ ಜಾರಿಯಾಗಿದೆ.
ಜೂನ್ ತಿಂಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 130 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಇದೀಗ 195ರೂ.ನಷ್ಟು ಕಡಿತ ಮಾಡಲಾಗಿದೆ.
ಮುಂಬೈಯಲ್ಲಿ 195.50, ಕೋಲ್ಕೊತ್ತಾದಲ್ಲಿ 182 ಹಾಗೂ ಚೆನ್ನೈನಲ್ಲಿ 187 ರೂ.ನಷ್ಟು ಇಳಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕೂಡ ವಾಣಿಜ್ಯ ಬಳಕೆ ಸಿಲಿಂಡರ್ ದರ ಇಳಿಕೆ ಮಾಡಿದ್ದು ಗೃಹಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.
ರೈಲ್ವೆ ಟ್ರ್ಯಾಕ್ ಮೇಲೆ ಅಪರಿಚಿತ ವ್ಯಕ್ತಿ ಶವ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ