Kannada NewsLatest

ಮುಂದುವರೆದ ಭಾರಿ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನರು ತತ್ತರಿಸಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಕೂಡ ಮಳೆ ಮುಂದುವರೆದಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಇಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಹಿಡಿದು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಮಂಗಳೂರು ಹೊರವಲಯದ ಮಾಡೂರು ಬಳಿ ಬೀರಿಯಿಂದ ದೇರಳಕಟ್ಟೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದೆ. ವಿದ್ಯುತ್ ಕೇಬಲ್ ಮೇಲೆ ಬೃಹ ತ್ ಮರ ಉರುಳಿಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮನೆಗಳಿಗೂ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ. ಹಲವೆಡೆ ಸೇತುವೆಗಳು ಮುಳುಗಡೆಯಾಗಿವೆ.

ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

ಶಾಸಕ ಜಮೀರ್ ಅಹ್ಮದ್ ಗೆ ACB ಶಾಕ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button