ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟು ಹಬ್ಬವನ್ನು ರಾಜ್ಯ ಕಾಂಗ್ರೆಸ್ ಘಟಕ ಅದ್ದೂರಿಯಾಗಿ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದೆ.
ಆಗಸ್ಟ್ 12ರಂದು ಸಿದ್ದರಾಮಯ್ಯ ಅವರ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ 62 ಸದಸ್ಯರನ್ನು ಒಳಗೊಂಡ ಸಿದ್ದರಾಮಯ್ಯ ಅಮೃತ ಮಹೋತ್ಸವ ವಿಶೇಷ ಸಮಿತಿ ರಚನೆ ಮಾಡಿದೆ. ಸ್ವಾಗತ ಸಮಿತಿ ಮತ್ತು ಇತರ ಸಮಿತಿಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಈ ನಡುವೆ ಸಿದ್ದರಾಮೋತ್ಸವ ಸಮಿತಿ ಬಗ್ಗೆ ವ್ಯಂಗ್ಯವಾಡಿರುವ ರಾಜ್ಯ ಬಿಜೆಪಿ ಘಟಕ ಇದೇನು ಕರ್ನಾಟದ #G23 ನಾಯಕರ ಪಟ್ಟಿಯೇ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ನೇರಾನೇರ ಬೆದರಿಸಲು ಗುಂಪು ಕಟ್ಟಿಕೊಂಡಂತಿದೆ! ಇದು ಸಿದ್ದರಾಮೋತ್ಸವ ಸಮಿತಿಯೋ ಅಥವಾ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಯೋ? ಬಹುಶಃ ಇದು ಬಂಡಾಯ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಯಾಗಿರುವ ಸಾಧ್ಯತೆ ಇದೆ ಎಂದು ಹೇಳಿದೆ.
ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಚಿಸಿರುವ ಎರಡು ಸಮಿತಿಗಳ ಪಟ್ಟಿ ವಿವರಗಳಿಗೆ ಈ ಕೆಳಗಿನ ಲಿಂಕ್ ಗಳನ್ನು ಕ್ಲಿಕ್ ಮಾಡಿ
swath samithi – 04-07-2022_220706_105753
ನಿಡಸೋಸಿ ಶ್ರೀಗಳ ಕಾರು ಭೀಕರ ಅಪಘಾತ: ನಜ್ಜುಗುಜ್ಜಾದ ಕಾರು; ಶ್ರೀಗಳಿಗೆ ಗಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ