Latest

ಮಳೆ ಅಬ್ಬರಕ್ಕೆ ಬಾಯ್ತೆರೆದ ರಸ್ತೆ; ಭೂಮಿಯೊಳಗಿಂದ ಭಯಂಕರ ಶಬ್ಧ; ಕಂಗಾಲಾದ ಜನರು

ಪ್ರಗತಿವಾಹಿನಿ ಸುದ್ದಿ; ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದೆ. ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕ್ಷಣ ಕ್ಷಣಕ್ಕೂ ಜನರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎರಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಳೆಯ ಅಬ್ಬರಕ್ಕೆ ಕರಾವಳಿ ಜಿಲ್ಲೆಯ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಅಪಾರ ಪ್ರಮಾಣದ ಕೃಷಿ ಭೂಮಿ ಜಲಾವೃತಗೊಂಡಿವೆ. ಹಲವೆಡೆ ಮರಗಳು ಧರಾಶಾಹಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಅರಬೈಲ್ ಘಾಟ್ ನಲ್ಲಿ ಭೂಕುಸಿತವುಂಟಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಅಂಕೋಲಾ ಬಳಿ ಗಂಗಾವಳಿ ನದಿ ಮಧ್ಯೆ ಬೋಟ್ ಸಿಲುಕಿಕೊಂಡ ಪರಿಣಾಮ ಐವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಬರದಿಂದಸಾಗಿದೆ.

Home add -Advt

ಇನ್ನೊಂದೆಡೆ ಬಿರುಗಾಳಿ, ಮಳೆ ನಡುವೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭೂಮಿಯೊಳಗಿಂದ ಭಯಂಕರ ಶಬ್ಧ ಕೇಳಿಬಂದಿದ್ದು, ರಸ್ತೆಗಳು ಸಂಪೂರ್ಣ ಬಿರುಕುಬಿಟ್ಟಿವೆ. ಇದ್ದಕ್ಕಿಂದಂತೆ ರಸ್ತೆಗಳು ಬಾಯ್ತೆರೆದ ರೀತಿ ಕಂಡು ತಾಲೂಕಿನ ಜನರು ಆತಂಕಕ್ಕೀಡಾಗಿದ್ದಾರೆ.

ಕರಾವಳಿ ಹಾಗೂ ಮಲೆನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಮತ್ತಷ್ಟು ಭೂಕುಸಿತವುಂಟಾಗುವ ಭೀತಿ ಎದುರಾಗಿದೆ. ನದಿ ಹಾಗೂ ಸಮುದ್ರ ತೀರದ ಜನತೆಗೆ ಕಟ್ಟೆಚ್ಚರವಹಿಸುವಂತೆ ಜಿಲ್ಲಾಡಳಿತಗಳು ಸೂಚಿಸಿವೆ.

ಭಾರಿ ಮಳೆ: ರಕ್ಷಣಾ ಹಾಗೂ ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

Related Articles

Back to top button