Latest

ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಸೇರಿ ನಾಲ್ವರ ನಾಮನಿರ್ದೇಶನ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಪ್ರಮುಖರನ್ನು ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಖುದ್ದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿರೇಂದ್ರ ಹೆಗ್ಗಡೆ ಜತೆಗೆ ಸಂಗೀತ ಮಾಂತ್ರಿಕ ಇಳಯರಾಜ, ನಿರ್ದೇಶಕ ರಾಜಮೌಳಿ ಅವರ ತಂದೆ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ಪಿ.ಟಿ.ಉಷಾ ರಾಜ್ಯಸಭೆಗೆ ನಾಮನಿರ್ದೇಶಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

*ರಾಜ್ಯಸಭೆಗೆ ಡಾ. ಡಿ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ*

ಬೆಂಗಳೂರು
ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಡಾ. ಹೆಗ್ಗಡೆಯವರನ್ನು ಅಭಿನಂದಿಸಿರುವ ಮುಖ್ಯಮಂತ್ರಿಗಳು, ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ ಜನಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿರುವ ಶ್ರೀ ಹೆಗ್ಗಡೆಯವರ ಅನುಭವ ಸಂಸತ್ತಿನ ಕಲಾಪಗಳ ಸತ್ವ ಹೆಚ್ಚಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಜ್ಯಸಭೆಗೆ ನಾಮನಿರ್ದೇಶನಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಂಥ ಅರ್ಹರನ್ನು ಶಿಫಾರಸು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಅವರೊಂದಿಗೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಒಲಿಂಪಿಯನ್ ಅಥ್ಲೀಟ್ ಆಗಿದ್ದ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಖ್ಯಾತ ಚಿತ್ರ ನಿರ್ದೇಶಕ, ಚಿತ್ರ ಸಾಹಿತಿ ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನೂ ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

ಮಳೆ ಅಬ್ಬರಕ್ಕೆ ಬಾಯ್ತೆರೆದ ರಸ್ತೆ; ಭೂಮಿಯೊಳಗಿಂದ ಭಯಂಕರ ಶಬ್ಧ; ಕಂಗಾಲಾದ ಜನರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button