ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರಕಾಶ ಹುಕ್ಕೇರಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪ್ರಕಾಶ ಹುಕ್ಕೇರಿ ಹಾಗೂ ಮಧು ಜಿ. ಮಾದೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾದ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ ಕ್ಷೇತ್ರದಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಸಚಿವರಾಗಿಯೂ ಸೇವೆ ಸಲ್ಲಿಸಿದ ಅವರು, ಇತ್ತೀಚೆಗೆ ನಡೆದ ಎಂಎಲ್ ಸಿ ಚುನಾವಣೆಯಲ್ಲಿ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಥಮ ಪ್ರಾಶಸ್ತ್ಯದ 11460 ಮತಗಳನ್ನು ಪಡೆದು ವಿಜಯ ಸಾಧಿಸಿದ್ದರು.
ಅವರ ಪುತ್ರ ಗಣೇಶ ಹುಕ್ಕೇರಿ ಶಾಸಕರಾಗಿ ಚಿಕ್ಕೋಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಬಸ್ಗಾಗಿ ವಿದ್ಯಾರ್ಥಿಗಳ ಪರದಾಟ; ಸಮಯಕ್ಕೆ ಸರಿಯಾಗಿ ಬಸ್ ಬಿಡಲು ಆಗ್ರಹ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ