ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಅದರಲ್ಲೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಹಲವೆಡೆ ಭೂಕುಸಿತ, ಪ್ರವಾಹ ಭೀತಿ ಉಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ಶಾಲೆ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಕಟಿಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲಿ ನಿಂದಿನಿ ನದಿ ಅಬ್ಬರ ಜೋರಾಗಿದ್ದು, ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದೆ. ಉಡುಪಿಯಲ್ಲಿ ಸೌಪರ್ಣಿಕಾ ನದಿ ಪ್ರವಾಹಕ್ಕೆ ಜನರು ತತ್ತರಗೊಂಡಿದ್ದು, ಜನರು ಗ್ರಾಮಗಳನ್ನು ತೊರೆದು ದೋಣಿಗಳ ಮೂಲಕ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ.
ಕೊಡಗಿನಲ್ಲಿ ಭಾರಿ ಮಳೆಯಿಂದಾಗಿ ಅಲ್ಲಲ್ಲ ಗುಡ್ಡ ಕುಸಿತವಾಗಿದ್ದು, ಇನ್ನೊಂದೆಡೆ ಭೂಕಂಪನವಾಗುತ್ತಿದೆ. ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಡಿಕೇರಿ ತಾಲೂಕಿನ ಕೊಟ್ಟಮುಡಿ, ಚೆರಿಯಪರಂಬು ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಇನ್ನು ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಅಂಬೋಲಿ ಫಾಲ್ಸ್ ಮೈದುಂಬಿ ಹರಿಯುತ್ತಿದೆ. ಮತ್ತೊಂದೆಡೆ ಕೊಯ್ನಾ ಜಲಾಶಯ ಭರ್ತಿಯಾಗಿದ್ದು, ಘಟಪ್ರಭಾ ನಡಿ ತುಂಬಿ ಹರಿಯುತ್ತಿದೆ. ಕೃಷ್ಣಾನದಿಯಲ್ಲಿ ಒಳಹರಿವು ಹೆಚ್ಚಾಗಿದೆ ಜಿಲ್ಲೆಯಲ್ಲಿಯೂ ಪ್ರವಾಹ ಭೀತಿ ಎದುರಾಗಿದೆ. ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಬಾಲಿವುಡ್ ನಟ ರಾಜ ಬಬ್ಬರ್ ಗೆ ಜೈಲು ಶಿಕ್ಷೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ