ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು 2017ರಲ್ಲಿ ಮಾಡಿದ್ದ ಟ್ವೀಟ್ ವಿವಾದಕ್ಕೆ ಸಂಬಂಧಿಸಿದಂತೆ ಹರಿಯಾಣ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅರುಣ್ ಯಾದವ್ ಅವರನ್ನು ವಜಾ ಮಾಡಲಾಗಿದೆ.
ಟ್ವೀಟ್ ವಿವಾದಕ್ಕೆ ಸಂಬಂಧಿಸಿದಂತೆ ಅರುಣ್ ಯಾದವ್ ಬಂಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಗಳು ಕೇಳಿಬಂದಿದ್ದವು. ಇದೀಗ ಬಿಜೆಪಿ ಹರಿಯಾಣ ಐಟಿ ಸೆಲ್ ಮುಖ್ಯಸ್ಥ ಸ್ಥಾನದಿಂದ ಅರುಣ್ ಯಾದವ್ ಅವರನ್ನು ತೆಗೆದುಹಾಕಿದೆ.
ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬಿಜೆಪಿ ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಅಲ್ಲದೇ ಕಾರ್ಯಕಾರಿ ಸ್ಥಾನದಲ್ಲಿದ್ದ ನವೀನ್ ಜಿಂದಾಲ್ ವಿರುದ್ಧವೂ ಕ್ರಮ ಕೈಗೊಂಡಿತ್ತು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅರುಣ್ ಯಾದವ್ ಅವರನ್ನು ವಜಾಗೊಳಿಸಲಾಗಿದೆ.
ಬೈಕ್ ಗೆ ಲಾರಿ ಡಿಕ್ಕಿ; ಅಮ್ಮ-ಮಗ ಸ್ಥಳದಲ್ಲೇ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ