Latest

ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ನಟ ವಿಕ್ರಮ್ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಟಾಲಿವುಡ್ ನಟ ವಿಕ್ರಮ್ ಗೆ ಹೃದಯಾಘಾತವಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಚೆನ್ನೈನಲ್ಲಿ ಇಂದು ಸಂಜೆ ವಿಕ್ರಮ್ ನಟನೆಯ ಪೊನ್ನಿಯಿನ್ ಸೆಲ್ವನ್ ಇನ್ ಚೆನ್ನೈ ಎಂಬ ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಟ ವಿಕ್ರಮ್ ಭಾಗವಹಿಸುವವರಿದ್ದರು, ಆದರೆ ಅಷ್ತರಲ್ಲಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಗುಂಡಿನ ದಾಳಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button