ಮಳೆ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಸೂಚನೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಇನ್ನು ರೆಡುದಿನಗಳ ಕಾಲ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಭಾರಿ ಮಳೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚೆಂಡಿಯಾದಲ್ಲಿ 24 ಗಂಟೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಭೂಕುಸಿತವಾಗಿದ್ದು, ಮಹಾರಾಷ್ಟ್ರ ಘಟ್ಟಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿರುವುದರಿಂದ ಕೃಷ್ಣ ನದಿ ತೀರ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಿಕೊಳ್ಳುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ