Kannada NewsKarnataka News

ಸುಕ್ಷೇತ್ರ ತೋರಣಹಳ್ಳಿ ಗ್ರಾಮದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಿಂದ ರೈತರಿಗೆ ಅನುಕೂಲ: ಸಂಸದ ಅಣ್ಣಾಸಾಹೇಬ ಜೊಲ್ಲೆ  

ಪ್ರಗತಿವಾಹಿನಿ ಸುದ್ದಿ, ನಾಗರಮುನ್ನೋಳಿ: ಮಳೆ ನೀರು ಹರಿದು ಜಲಾಶಯ ಸೇರುವುದರಿಂದ ನೀರಿನ ಜೊತೆ ಮಣ್ಣು ಹೋಗುತ್ತದೆ. ಇದನ್ನು ತಡೆಯಲು ಪ್ರಧಾನಮಂತ್ರಿಗಳು ಸಮಗ್ರ ಕೃಷಿ ಸಿಂಚಾಯಿ ಯೋಜನೆ ಜಾರಿ ಮಾಡಿದ್ದಾರೆ. ನೀರು ತಡೆಯುವುದರಿಂದ  ಬಾವಿ, ಬೋರ್ ವೆಲ್ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ತಾಲೂಕಿನ ತೋರಣಹಳ್ಳಿ ಗ್ರಾಮದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕದಡಿ ಜಲಾನಯನ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಸಿಂಚಾಯಿ ಯೋಜನೆಗೆ 13.62 ಕೋಟಿ ರೂ ಮಂಜೂರು ಆಗಿದೆ. ಈ ಯೋಜನೆಯನ್ನು ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿಸ್ತರಿಸಲು ಪ್ರಯತ್ನ ಮಾಡಲಾಗುತ್ತದೆ ಎಂದರು.

ಕಿಸಾನ ಸಮ್ಮಾನ ಯೋಜನೆ 25 ಕೋಟಿ ರೈತರಿಗೆ ಅನುಕೂಲವಾಗಿದೆ. ಕೇಂದ್ರ ಸರಕಾರ ಜಾರಿ ಮಾಡಿರುವ ಯೋಜನೆಗಳು ಪ್ರತಿಯೊಬ್ಬರಿಗೆ ಮುಟ್ಟಿಸುವ ಕೆಲಸವನ್ನು ಸರಕಾರ ಮಾಡುತ್ತದೆ ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಸಮಗ್ರ ಜಲಾನಯನ ಮೂಲಕ ನಾಲ್ಕು ಗ್ರಾಮ ಪಂಚಾಯತಿ ವ್ಯಾಪ್ತಿಯ 6100 ಹೆಕ್ಟರ ಪ್ರದೇಶದಲ್ಲಿ ಬದು ನಿರ್ಮಾಣ ಮಾಡಲಾಗುತ್ತದೆ. ಓಡುವ ನೀರನ್ನು ತಡೆಯಬೇಕು. ನೀರು ಇಂಗುವ ಹಾಗೇ ಮಾಡಿದರೇ ಮಣ್ಣು ಫಲವತ್ತೆ ಪಡೆಯುತ್ತೇ. ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಮಣ್ಣು ರೈತನ ಕಣ್ಣು. ಮಣ್ಣು ಸಂರಕ್ಷಣೆ ಮಾಡಿದರೇ ರೈತನಿಗೆ ಅನುಕೂಲವಾಗುತ್ತದೆ. ಮಳೆ ನೀರು ಹರಿದು ಹೋಗದಂತೆ ತಡೆದು ನಿಲ್ಲಿಸುವುದೇ ಸಮಗ್ರ ಜಲಾನಯನ ಯೋಜನೆಯನ್ನು ಪ್ರಧಾನಿ ಜಾರಿಗೆ ತಂದಿದ್ದಾರೆ ಎಂದರು.

ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ ಮಾತನಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆಯವರ ವಿಶೇಷ ಪ್ರಯತ್ನದಿಂದ ಪ್ರಧಾನಮಂತ್ರಿ ಸಿಂಚಾಯಿ ಯೋಜನೆ ಜಾರಿಗೆ ಬಂದಿದೆ.ರೈತರು ಆಸಕ್ತಿಯಿಂದ ಯೋಜನೆಯ ಲಾಭ ಪಡೆಯಬೇಕು ಎಂದರು.

ಕೃಷಿ ಇಲಾಖೆ ಉಪನಿರ್ದೇಶಕ ಎಲ್.ಐ.ರೂಡಗಿ,  ನ್ಯಾಯವಾದಿ ಅಶೋಕ ಹರಗಾಪುರೆ, ಬಿಜೆಪಿ ಕೃಷಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ. ರಾಮನಗೌಡ ಪಾಟೀಲ. ಸಹಾಯಕ ಕೃಷಿ ನಿರ್ದೇಶಕ ಮಂಜೂನಾಥ ಜನಮಟ್ಟಿ, ರಾಮಗೌಡ ಸಣ್ಣಲಚ್ಚಪ್ಪಗೋಳ, ವಿಜಯ ಕೋಠಿವಾಲೆ, ಬಸವರಾಜ ಮಾಳಗೆ, ಎಪಿಎಂಸಿ ಉಪಾಧ್ಯಕ್ಷ ರಾಯಗೌಡ ಕೆಳಗಿನಮನಿ, ಕೃಷ್ಣಪ್ಪ ಜೋಗಿ, ಗ್ರಾಪಂ ಅಧ್ಯಕ್ಷ ಸುರೇಶ ಘರಬುಡೆ ಮುಂತಾದವರು ಇದ್ದರು.

ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ; ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button