ಪ್ರಗತಿವಾಹಿನಿ ಸುದ್ದಿ; ಹಾಸನ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಭೂಕುಸಿತವುಂಟಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ಸಕಲೇಶಪುರದ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಭಾರಿ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಭೂಕುಸಿತವುಂತಾದ ಪರಿಣಾಮ ಒಂದು ತಿಂಗಳ ಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಇದೀಗ ಮತ್ತದೇ ಜಾಗದಲ್ಲಿ ಭೂ ಕುಸಿತವುಂಟಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಹೆಚ್ಚಿನ ಭೂಕುಸಿತವಾಗದಂತೆ ಹೆದ್ದಾರಿ ನಿರ್ಮಾಣ ಕಂಪನಿ ಮರಳು ಚೀಲ ಜೋಡಿಸುತ್ತಿದೆ. ಇದೇ ರೀತಿ ಮಳೆ ಮುಂದುವರೆದರೆ ಶಿರಾಡಿಘಾಟ್ ನಲ್ಲಿ ಇನ್ನಷ್ಟು ಭೂಕುಸಿತವಾಗಿವ ಭೀತಿ ಎದುರಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ಬ್ರೇಕ್ ಬೀಳುವ ಸಾಧ್ಯತೆ ಇದೆ ಎಂಬ ಆತಂಕ ಎದುರಾಗಿದೆ.
ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮೂವರ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ