ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಬ್ರೇನ್ ಡೆಡ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಹೃದಯವನ್ನು ಬೆಳಗಾವಿಯ ಹುಡುಗನಿಗೆ ಜೋಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರೀನ್ ಕಾರಿಡಾರ್ ಮೂಲಕ ಇಂದು ಸಂಜೆ ಧಾರವಾಡದಿಂದ ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ಹೃದಯ ಕೊಂಡೊಯ್ಯಲಾಗುತ್ತಿದೆ.
ಧಾರವಾಡ ಎಸ್ ಡಿಎಂ ಆಸ್ಪತ್ರೆಯಿಂದ ಬ್ರೇನ್ ಡೆಡ್ ಆಗಿದ್ದ ಯುವತಿ ಹಾರ್ಟ್ ನನ್ನು ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಹುಡುಗನಿಗೆ ಹಾರ್ಟ್ ಜೋಡಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರವಾಡದಿಂದ ಬೆಳಗಾವಿ ಕೆ ಎಲ್ ಇ ಆಸ್ಪತ್ರೆವರೆಗೆ ಝೀರೊ ಟ್ರಾಫಿಕ್ ನಿರ್ಮಾಣಕ್ಕೆ ಪೊಲೀಸರು ಸಜ್ಜಾಗಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆಗೆ ಎಸ್ ಡಿ ಎಂ ಆಸ್ಪತ್ರೆಯಿಂದ ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ಝಿರೋ ಟ್ರಾಫಿಕ್ ನಲ್ಲಿ ಹೃದಯ ರವಾನೆಯಾಗಲಿದ್ದು, ಈ ನಿಟ್ಟಿನಲ್ಲಿ ಗ್ರೀನ್ ಕಾರಿಡಾರ್ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಧಾರವಾಡದಿಂದ ಬೆಳಗಾವಿವರೆಗೂ ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಮಳೆ ಹಾನಿ ಪ್ರದೇಶಕ್ಕೆ ಸಿಎಂ ಭೇಟಿ; ನಾಳೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ