ಮಹಾರಾಷ್ಟ್ರದ ಬೆನ್ನಲ್ಲೇ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು; ಕಾಂಗ್ರೆಸ್ ಶಾಸಕರ ಅಸಮಾಧಾನದ ‘ಷಡ್ಯಂತ್ರ’ ಬಿಚ್ಚಿಟ್ಟ ದಿನೇಶ್ ಗುಂಡೂರಾವ್
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಆರಂಭವಾಗಿದ್ದ ರಾಜಕೀಯ ಬಿಕ್ಕಟ್ಟು, ಸರ್ಕಾರದ ವಿರುದ್ಧ ಶಾಕರ ಬಂಡಾಯ, ಹೊಸ ಸರ್ಕಾರ ರಚನೆ ಬೆನ್ನಲ್ಲೇ ಇದೀಗ ಗೋವಾ ರಾಜಕೀಯದಲ್ಲಿ ಬಿಕಟ್ಟು ಉದ್ಭವಿಸಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಬಿರುಕು ಮೂಡಿದ್ದು, ಐವರು ಶಾಸಕರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಐವರು ಶಾಸಕರಾದ ಮೈಕಲ್ ಲೋಬೊ, ದಿಗಂಬರ್ ಕಾಮತ್, ಕೇದಾರ್ ನಾಯಕ್, ರಾಜೇಶ್ ಫಲ್ದೇಸಾಯಿ ಹಾಗೂ ದೆಲಿಲಾಹ್ ಲೊಬೊ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದು, ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿರುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಆಪರೇಷನ್ ಕಮಲದ ಮೂಲಕ ತನ್ನತ್ತ ಸೆಳೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಗೋವಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಒಡೆಯಲು ಅನೇಕ ವಿಚ್ಛಿದ್ರಕಾರಿ ಶಕ್ತಿಗಳು ಕೈ ಜೋಡಿಸಿವೆ. ಗೋವಾ ಕಾಂಗ್ರೆಸ್‌ನ್ನು ಒಡೆಯುವ ಷಡ್ಯಂತ್ರದ ಹಿಂದೆ ಕೇವಲ ಬಿಜೆಪಿಯಷ್ಟೇ ಅಲ್ಲ, ಇಲ್ಲಿನ ಗಣಿ ಮತ್ತು ಕಲ್ಲಿದ್ದಲಿನ ಲಾಬಿಯೂ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಗಣಿ ಮಾಫಿಯಾ ಮತ್ತು ಬಿಜೆಪಿ ಸರ್ಕಾರ ಗೋವಾವನ್ನು ಪ್ರತಿಪಕ್ಷ ಮುಕ್ತ ರಾಜ್ಯ ಮಾಡುವ ಹುನ್ನಾರ ನಡೆಸಿವೆ. ಆದರೆ ಈ ಹುನ್ನಾರಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಗಣಿ ಮಾಫಿಯಾದ ಜೊತೆ ಷಾಮೀಲಾಗಿರುವ ಗೋವಾದ ಬಿಜೆಪಿ ನೇತೃತ್ವದ ಸರ್ಕಾರ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗುತ್ತಿದೆ. ಗೋವಾ ಕಾಂಗ್ರೆಸ್ ಈ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಸದಾ ಹೋರಾಡಲಿದೆ. ಬಿಜೆಪಿಯ ಷಡ್ಯಂತ್ರಕ್ಕೆ ಗೋವಾ ಕಾಂಗ್ರೆಸ್ ಯಾವತ್ತೂ ಮಣಿಯುವುದಿಲ್ಲ ಎಂದುಕಿಡಿಕಾರಿದ್ದಾರೆ.
ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಬಹುಮೂಲ್ಯ; ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ