Latest

ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ; ತಾಯಿ-ಮಗಳು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಜಿಲ್ಲೆಗಳು ಮಹಾಮಳೆಯಿಂದ ತತ್ತರಿಸಿವೆ. ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ನಡೆದಿದೆ.

ತಡರಾತ್ರಿಯಿಂದ ಸುರಿದ ಭಾರಿ ಮಳೆಗೆ ಇಂದು ಬೆಳಗಿನ ಜಾವ ಮನೆಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ಮಲಗಿದ್ದ ತಾಯಿ ಹಾಗೂ ಮಗಳು ಮೃತಪಟ್ಟಿದ್ದಾರೆ. ರುಕ್ಮಿಣಿ ವಿಠಲ್ ಮಾಚಕ (37) ಶ್ರೀದೇವಿ ವಿಠಲ್ ಮಾಚಕ (13) ಮೃತರು.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Related Articles

Back to top button