Latest

ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಭಾರಿ ಮಳೆಯಿಂದ ಹಾನಿಯಾಗಿರುವ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿಗೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಯಿ, ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಗಂಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ ಎಲ್ಲರಿಗೂ ಪಡಿತರ ವಿತರಣೆ ಮಾಡುವಂತೆ ಸೂಚಿಸಲಾಗಿದೆ ಎಂದರು ತಿಳಿಸಿದರು.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು. ಗಂಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಕಂಟ್ರೋಲ್ ರೂಂನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಕೊಡಗು ಜಿಲ್ಲೆಯ ನಾಲ್ಕು ತಹಶೀಲ್ದಾರರ ಖಾತೆಗಳಲಿ ತಲಾ 25 ಲಕ್ಷ ರೂ.ಗಳು ಲಭ್ಯವಿದೆ. ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ.ಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಹೇಳಿದರು.

ಕಾವೇರಿ ಮತ್ತು ಹಾರಂಗಿ ನದಿಪಾತ್ರದಲ್ಲಿನ ಹೂಳು ತೆಗೆಯಲು ಕ್ರಮ:
ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಹೂಳು ತುಂಬಿದೆ. ಅದರ ಜೊತೆಗೆ ನೀರಿನ ಹರಿವಿನಿಂದ ನೀರು ಹೊರಗೆ ಹರಿಯುತ್ತಿದೆ. ಇದನ್ನು ತಪ್ಪಿಸಲು ಹಾರಂಗಿ ಜಲಾಶಯದ ಹಿಂದಿನ ಪ್ರದೇಶಕ್ಕೆ ಈಗಾಗಲೇ 40 ಕೋಟಿ ರೂ.ಗಳ ಮಂಜೂರಾತಿ ನೀಡಿದ್ದು, ಕೆಲಸ ಕೂಡಲೇ ಪ್ರಾರಂಭವಾಗುತ್ತದೆ. ಹೂಳು, ಮಣ್ಣು ತೆಗೆಯುವುದು ಹಾಗೂ ಗೋಡೆ ನಿರ್ಮಾಣ ಕಾರ್ಯವನ್ನು ಇದು ಒಳಗೊಂಡಿದೆ. ಕಾವೇರಿ ನದಿಯಲ್ಲಿನ ಹೂಳು ತೆಗೆಯಲು ಕಾವೇರಿ ನೀರಾವರಿ ನಿಗಮಕ್ಕೆ ಸೂಚಿಸಲಾಗಿದೆ. ನೀರು ನಿಲ್ಲದಂತೆ ಮಾಡಲು ಕ್ರಮ ಕೈಗೊಳ್ಳಲು ಹಾಗೂ ಮರದ ದಿಮ್ಮಿಗಳನ್ನು ಕೂಡಲೇ ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಳೆದ ಬಾರಿಯ ದಿಮ್ಮಿಗಳು ಹಾಗೆಯೇ ಉಳಿದುಕೊಂಡಿರುವ ಬಗ್ಗೆ ದೂರುಗಳು ಬಂದಿದ್ದು, ನದಿ ಪಾತ್ರದಲ್ಲಿ ಯಾವುದೇ ಮರದ ದಿಮ್ಮಿಗಳು ಇರಬಾರದು ಎಂದು ಸೂಚಿಸಲಾಗಿದೆ ಎಂದರು.

Home add -Advt

ಜುಲೈ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸಣ್ಣ ಪ್ರಮಾಣದ ಭೂಕುಸಿತವಾಗಿ ಸಂಚಾರ ಕಡಿತಗೊಂಡಿದೆ. ಮನೆಗಳು ಹಾನಿಗೊಳಗಾಗಿವೆ. ನದಿ ಪಾತ್ರಗಳು ಉಕ್ಕಿ ಹರಿದು ಜಮೀನುಗಳಿಗೆ ಹಾಗೂ ಮನೆಗಳಿಗೆ ನೀರುನುಗ್ಗಿದೆ. ರಸ್ತೆಗಳು ಹಾನಿಗೊಳಗಾಗಿದ್ದು, ಸೇತುವೆಗಳು ಮಣ್ಣು ಮತ್ತು ಮರದ ದಿಮ್ಮಿಗಳಿಂದ ತುಂಬಿವೆ. ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಇವೆಲ್ಲವನ್ನೂ ಇಂದು ಪರಿಶೀಲಿಸಲಾಗಿದೆ.

ಮನೆಗಳಿಗೆ ಪರಿಹಾರ:

ಈ ಬಾರಿಯ ಮುಂಗಾರಿನಲ್ಲಿ ಹತ್ತು ದಿನಗಳೊಳಗೆ ಶೇ 114% ಮಳೆಯಾಗಿದ್ದು, ಸಂಪೂರ್ಣ ಹಾನಿಗೊಳಗಾಗಿರುವ ಮನೆಗಳಿಗೆ 5 ಲಕ್ಷ ರೂ. ಹಾಗೂ ತೀವ್ರ ಹಾನಿಯಾದ ಮನೆಗಳಿಗೆ 3 ಲಕ್ಷ ರೂ. ಮತ್ತು ಭಾಗಶ: ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂ.ಗಳ ಪರಿಹಾರವನ್ನು ಕೂಡಲೇ ನೀಡಲು ಸೂಚಿಸಲಾಗಿದೆ. ಸಂಪೂರ್ಣ ಬಿದ್ದುಹೋಗಿರುವ ಮನೆಗಳಿಗೆ ತುರ್ತು ವ್ಯವಸ್ಥೆಗಾಗಿ ಈಗಾಗಲೇ 10 ಸಾವಿರ ರೂ.ಗಳನ್ನು ನೀಡಲಾಗಿದೆ ಎಂದು ವಿವರಿಸಿದರು.

ಒಂದೂವರೆ ತಿಂಗಳೊಳಗೆ ಬಾಕಿ ಇರುವ ಮನೆಗಳ ಹಸ್ತಾಂತರ; ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮುಂದಿನ 72 ಗಂಟೆಗಳಲ್ಲಿ ಭಾರಿ ಮಳೆ; ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಘೋಷಣೆ

Related Articles

Back to top button