ಪ್ರಗತಿವಾಹಿನಿ ಸುದ್ದಿ; ಉಡುಪಿ: ಮಳೆ ನಡುವೆಯೇ ಮಳೆಹಾನಿ ಪರಿಶೀಲನೆಗಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯಲ್ಲಿದ್ದು, ಈ ಮಧ್ಯೆ ಭಟ್ಕಳ ಪ್ರವಾಸ ರದ್ದುಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರವಾಸವನ್ನು ಕಾರಣಾಂತರಗಳಿಂದ ರದ್ದುಗೊಳಿಸಲು ತೀರ್ಮಾನಿಸಲಾಗಿದೆ. ರಸ್ತೆ ಮಾರ್ಗವಾಗಿ ಓಡಾಡುವುದು ಕಷ್ಟ ಒಂದು ಸ್ಥಳಕ್ಕಾಗಿ ಅಷ್ಟು ದೂರ ಪ್ರವಾಸ ಬೇಡ ಭಟ್ಕಳದಲ್ಲಿನ ಮಳೆಹಾನಿ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇಂದು ಇಡೀ ದಿನ ಉಡುಪಿಯಲ್ಲಿಯೇ ಹೆಚ್ಚು ಸಮಯ ಕಳೆಯಲಿದ್ದು, ಅಲ್ಲಿಯೇ ಪರಿವೀಕ್ಷಣೆ ನಡೆಸಲಿದ್ದಾರೆ. ಮುಂದಿನಬಾರಿ ಬಂದಾಗ ಕಾರವಾರ, ಉತ್ತರಕನ್ನಡ ಜಿಲ್ಲೆಯ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಉಡುಪಿಗೆ ಆಗಮಿಸಿರುವ ಸಿಎಂ ಬೊಮ್ಮಾಯಿ, ಜಿಲ್ಲೆಯಲ್ಲಿ ಇಂದು ನೆರೆ ಪ್ರವಾಸ ಕೈಗೊಳ್ಳಲಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ನೆರೆ ಹಾನಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ