
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂಜಾನೆಯಿಂದ ಮಳೆಯಾಗುತ್ತಿದ್ದು, ಆದರೆ ವರುಣನ ಆರ್ಭಟ ತಗ್ಗಿದೆ. ಈ ಹಿನ್ನೆಲೆಯಲ್ಲಿ ಇಂದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ 5 ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾವೇರಿ ಹೊರತುಪಡಿಸಿ ಉತ್ತರ ಒಳನಾಡು ಜಿಲ್ಲೆಗಳ್ಲಲಿ ನಾಳೆಯಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಎರಡು ದಿನ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಸಿಎಂ ಭಟ್ಕಳ ಪ್ರವಾಸ ರದ್ದು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ