ಪ್ರಗತಿವಾಹಿನಿ ಸುದ್ದಿ; ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಜಿಲ್ಲೆಗಳಲ್ಲಿ ಸಮಸ್ಯೆಯುಂಟಾಗಿದ್ದು, 4 ಜಿಲ್ಲೆಗಳಲ್ಲಿ ವಾಡಿಕೆಗಿಂತಲು ಹೆಚ್ಚು ಮಳೆಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಳೆಯಿಂದಾಗಿ ಈವರೆಗೆ ರಾಜ್ಯದಲ್ಲಿ 32 ಜೀವಹಾನಿಯಾಗಿದೆ. 5 ಜನರು ನಾಪತ್ತೆಯಾಗಿದ್ದಾರೆ. 34 ಜನರು ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಮಳೆಯಿಂದಾಗಿ ಐವರು ಮೃತಪಟ್ಟರೆ, ಉತ್ತರ ಕನ್ನಡದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಮಳೆಯಿಂದಾಗಿ 355 ಹೆಕ್ಟೇರ್ ಬೆಳೆ ನಾಶವಾಗಿದೆ. 1065 ಮನೆಗಳಿಗೆ ಹಾನಿಯಾಗಿವೆ. 2,086 ರಸ್ತೆಗಳು ಹಾನಿಯಾಗಿವೆ. 4 ಎನ್ ಡಿ ಆರ್ ಎಫ್ ಹಾಗೂ 4 ಎಸ್ ಡಿ ಆರ್ ಎಫ್ ತಂಡಗಳು ಸಂಕಷ್ಟಕ್ಕೀಡಾದ ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದರು.
ಮಳೆಯಿಂದಾಗಿ ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂಪಾಯಿ, ತೀವ್ರ ಹಾನಿಯಾಗಿರುವ ಮನೆಗಳಿಗೆ 3 ಲಕ್ಷ ರೂಪಾಯಿ ಹಾಗೂ ಸ್ವಲ್ಪ ಪ್ರಮಾಣಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮನೆಹಾನಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು.
ಬೆಳೆ ಹಾನಿ ಬಗ್ಗೆ ವರದಿ ಬಂದ ತಕ್ಷಣ ಪರಿಹಾರ ನೀಡಲಾಗುವುದು. ಜಿಲ್ಲೆಗಳಿಂದ ವರದಿ ಬಂದ ಬಳಿಕ 500 ಕೋಟಿ ನೀಡಲಾಗುವುದು. ಮುಂದಿನ ವಾರವೂ ನೆರೆ ಪ್ರದೇಶಗಳಿಗೆ ಭೇಟಿ ಕೊಡುತ್ತೇನೆ. ಕಾರವಾರ, ಬೆಳಗಾವಿ, ಉತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದೇನೆ ಎಂದು ವಿವರಿಸಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ- ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ; ಕುತೂಹಲ ಮೂಡಿಸಿದ ಚರ್ಚೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ