ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ ಪೌಲ್ ಅವರನ್ನು ಮೂರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಎಡಿಜಿಪಿ ಅಮೃತ್ ಪೌಲ್ ಸೇರಿದಂತೆ ಐವರು ಆರೋಪಿಗಳ ಕಸ್ಟಡಿ ಅವಧಿ ಇಂದಿಗೆ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಐವರು ಆರೋಪಿಗಳನ್ನು ಸಿಐಡಿ ಪೊಲೀಸರು ಹಾಜರುಪಡಿಸಿದ್ದರು. ಇನ್ನಷ್ಟು ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಅಮೃತ್ ಪೌಲ್ ಅವರ ಕಸ್ಟಡಿ ಅವಧಿ ವಿಸ್ತರಿಸುವಂತೆ ಕೋರಿದ್ದರು.
ಈ ಹಿನ್ನೆಲೆಯಲ್ಲಿ ಅಮೃತ್ ಪೌಲ್ ಅವರನ್ನು ಮತ್ತೆ ಮೂರುದಿನಗಳ ಕಾಲ ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ. ಇದೇ ವೇಳೆ ಉಳಿದ ನಾಲ್ವರು ಆರೋಪಿಗಳಾದ ಹರ್ಷ, ಶ್ರೀಧರ್, ಶಾಂತಕುಮಾರ್ ಹಾಗು ಶ್ರಿನಿವಾಸ್ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ನೀಡಿದೆ.
ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದ ಕೆನಡಾ ಸಂಸದರ ಕುಟುಂಬ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ