ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರಿ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತವುಟಾಗಿದ್ದು, ರಾಜಧಾನಿ ಬೆಂಗಳೂರು ಹಾಗೂ ಕಡಲ ನಗರಿ ಮಂಗಳೂರಿಗೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ನ ದೋಣಿಗಲ್ ಸಮೀಪ ಭೂಕುಸಿತವುಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಇದೇ ಭಾಗದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಭೂಕುಸಿತ ಸಂಭವಿಸಿತ್ತು. ಮತ್ತಷ್ಟು ಭೂಕುಸಿತವಾಗದಂತೆ ಮರಳು ಚೀಲಗಳನ್ನು ಹಾಕಲಾಗಿತ್ತು. ಆದರೆ ಇಂದು ದೋಣಿಗಲ್ ನಲ್ಲಿ ಮತ್ತೆ ಭೂಕುಸಿತವುಂಟಾಗಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ದೋಣಿಗಲ್ ಬಳಿ ಭೂಕುಸಿತವುಟಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಧ್ಯ ಲಘುವಾನಗಳ ಸಂಚಾರಕ್ಕೆ ಅವಕಾಶ ನೀಡಲಗಿದ್ದು, ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಕಳೆದ ವರ್ಷ ಶಿರಾಡಿಘಾಟ್ ನಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಒಂದು ತಿಂಗಳ ಕಾಲ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಶಿರಾಡಿಘಾಟ್ ನಲ್ಲಿ ಭೂಕುಸಿತವುಂಟಾಗುತ್ತಿದ್ದು, ವಾಹನ ಸಂಚಾರ ಸಂಪೂರ್ನ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.
ಮಾಜಿ ಕಾರ್ಪೊರೇಟರ್ ಪತಿ ಹತ್ಯೆಗೆ ಟ್ವಿಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ