Latest

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸ್ಕೆಚ್; ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಎರಡು ದಿನಗಳ ಹಿಂದೆ ಪಾಟ್ನಾ ಪ್ರವಾಸದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ.

ಜುಲೈ 12ರಂದು ಪ್ರಧಾನಿ ನರೇಂದ್ರ ಮೋದಿ ಪಾಟ್ನಾದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ್ದರು. ಈ ವೇಳೆ ಪ್ರಧಾನಿ ಮೋದಿಯವರನ್ನು ಉಗ್ರರು ಟಾರ್ಗೆಟ್ ಮಾಡಿ, ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.

ಪ್ರಧಾನಿ ಮೋದಿ ಹತ್ಯೆಗಾಗಿ ಭಯೀತ್ಪಾದಕರು ಜುಲೈ 6, 7ರಂದು ಪಾಟ್ನಾದ ಫುಲ್ವಾರಿ ಷರೀಪ್ ಪ್ರದೇಶದಲ್ಲಿ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲಿ ಹತ್ಯೆಗೆ ಪ್ಲಾನ್ ನಡೆಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪಾಟ್ನಾಗೆ ಆಗಮಿಸಿದ್ದ ವೇಳೆ ಮೋದಿಯವರ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಹಾರ ಪೊಲೀಸರು ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಅಥರ್ ಪರ್ವೇಜ್ ಹಾಗೂ ಎಂ.ಡಿ.ಜಲಾಲುದ್ದೀನ್ ಎಂದು ಗುರುತಿಸಲಾಗಿದೆ. ಬಂಧಿತ ಉಗ್ರರಿಂದ 25 ಪಾಂಪ್ಲೆಟ್ ಗಳನ್ನು ಸೀಜ್ ಮಾಡಲಾಗಿದ್ದು, ಉಗ್ರರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ.

ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ; ಮಹಾ ಸರ್ಕಾರದಿಂದ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button