ಜಿಲ್ಲೆಯ ಪ್ರವಾಸಿ ತಾಣಗಳ ಸಂರಕ್ಷಣೆಗೆ ಅಡಾಪ್ಟ್ ಅ ಮೂಮೆಂಟ್: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯಲ್ಲಿರುವ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಪ್ರವಾಸಿ ತಾಣಗಳ ನಿರ್ವಹಣೆ ಹಾಗೂ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳಿಗೆ ಅಡಾಪ್ಟ್ ಎ ಮೂಮೆಂಟ್ ಯೋಜನೆ ಮೂಲಕ ದತ್ತು ನೀಡುವ ಕುರಿತು ಹಾಗೂ ಬೆಳಗಾವಿ ಜಿಲ್ಲೆಯಲ್ಲಿರುವ ಚಾರಣ ಮಾರ್ಗಗಳ ಅಭಿವೃದ್ಧಿ ಮತ್ತು ಜಿಲ್ಲೆಯಲ್ಲಿರುವ ಜಲಪಾತಗಳ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯಗಳ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಗೋಕಾಕ ತಾಲೂಕಿನಲ್ಲಿರುವ ಧೂಪದಾಳ ಪ್ರವಾಸಿ ಮಂದಿರದಲ್ಲಿ ಬುಧವಾರ(ಜುಲೈ 13) ಆಯೋಜಿಸಲಾಗಿದ್ದ ಜಿಲ್ಲಾ ಪ್ರವಾಸೋದ್ಯಮ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ, ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಳು, ವಿವಿಧ ಪ್ರವಾಸಿ ತಾಣಗಳ ಹಾಗೂ ಬೆಳಗಾವಿ ಜಿಲ್ಲೆಯ ಪೂರ್ಣ ಮಾಹಿತಿ ಇರುವ ಕಾಫಿ ಟೇಬಲ್ ಬುಕ್ ತಯಾರಿಸುವ ಬಗ್ಗೆ ಚರ್ಚಿಸಿದರು.
ಜಿಲ್ಲೆಯ ಗೋಕಾಕ ತಾಲೂಕಿನ ಗೋಡಚಿನಮಲ್ಕಿ ಫಾಲ್ಸ್, ಧೂಪದಾಳ ಫಾಲ್ಸ್ ಪ್ರದೇಶದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಮೂಲ ಸೌಲಭ್ಯ ಅಭಿವೃದ್ಧಿಪಡಿಸಲು ಹಾಗೂ ವಿಶೇಷವಾಗಿ ಗೋಕಾಕ ಫಾಲ್ಸ್ ಪ್ರದೇಶದ ಪಾಕಿಂಗ್ ಕುರಿತು ಟೆಂಡರ್ ಕರೆಯಲು ಕೊಣ್ಣೂರು ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿಯಯ ಅಧ್ಯಕ್ಷರೂ ಆಗಿರುವ ನಿತೇಶ್ ಪಾಟೀಲ ಅವರು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಓ ದರ್ಶನ್ ಎಚ್.ವಿ., ಎಸ್‌ಪಿ ಸಂಜೀವ ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹರ್ಷಭಾನು ಜಿ.ಪಿ., ಅಂತೋನಿ ಎಸ್.ಎಂ., ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇ ಶಕರಾದ ಸೈಯಿದಾ ಆಫ್ರಿನಾ ಬಾನು ಎಸ್. ಬಳ್ಳಾರಿ, ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಪುರಾತತ್ವ ಸಂರಕ್ಷಣಾ ಎಂಜಿನಿಯರ್, ಧಾರವಾಡ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಬೆಳಗಾವಿ, ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಚಿಕ್ಕೋಡಿ ವಿಭಾಗ, ಕೊಣ್ಣೂರ ಪುರಸಭೆ ಘಟಪ್ರಭಾ ಪುರಸಭೆ, ಮುಖ್ಯಾಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು, ಕೆಪಿಟಿಸಿಎಲ್, ಕಾರ್ಯನಿರ್ವಾಹಕ ಅಭಿಯಂತರರು, ಕೆಆರ್ ಐಡಿಎಲ್, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬೆಳಗಾವಿ ಮತ್ತು ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.
ಬಹುತೇಕ ಜಲಾಶಯಗಳು ಭರ್ತಿ; ಹೆಚ್ಚುವರಿ ನೀರು ಬಿಡುಗಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ