ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಿರ್ಮಾಪಕ ಹಾಗೂ ನಟ ವಿರೇಂದ್ರ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಿರೇಂದ್ರ ಬಾಬು ರಾಷ್ಟ್ರ ಜನಹಿತಾ ಪಕ್ಷ ಎಂಬ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ಚುನಾವಣೆಯಲ್ಲಿ ಟಿಕೆಟ್ ನೀಡುವ ಆಮಿಷವೊಡ್ಡಿ ಬಸವರಾಜ್ ಘೋಷಾಲ್ ಎಂಬುವವರಿಂದ 1.88 ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ.
ಹಣ ವಾಪಸ್ ಕೊಡದೇ ವಂಚಿಸಿದ್ದಾರೆ ಎಂದು ವಿರೇಂದ್ರ ಬಾಬು ವಿರುದ್ಧ ಕೋಡಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿರೇಂದ್ರ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವರುಣಾರ್ಭಟಕ್ಕೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ; ಶೃಂಗೇರಿ-ಆಗುಂಬೆ ಸಂಪರ್ಕ ಕಡಿತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ