ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಫೋಟೋ ತೆಗೆಯುವುದು, ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡುವಂತಿಲ್ಲ. ಸಾರ್ವಜನಿಕರು ಸರ್ಕಾರಿ ಕಚೇರಿಗೆ ಆಗಮಿಸುವುದು ಸಾಮಾನ್ಯ. ಆದರೆ ಹೀಗೆ ಬಂದ ಕೆಲ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಫೋಟೋ, ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಿತ್ತಿದ್ದಾರೆ. ಇದು ಸರ್ಕಾರದ ಇಲಾಖೆ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗುತ್ತಿದೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ.
ಆದ್ದರಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲೆ, ತಾಲೂಕು ಹಾಗೂ ರಾಜ್ಯಮಟ್ಟದ ವಿವಿಧ ಇಲಾಖೆಗಳ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನುಮತಿ ಪಡೆಯದೇ ಯಾವುದೇ ಫೋಟೋ, ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪರಿಹಾರ ಹಣವನ್ನು ಸಿದ್ದರಾಮಯ್ಯ ಕಾರಿನ ಮೇಲೆ ಬಿಸಾಕಿ ಮಹಿಳೆ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ