Latest

ನೋಡ ನೋಡುತ್ತಿದ್ದಂತೆ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಅರ್ಚಕ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ರಾಜ್ಯದಲ್ಲಿ ವರುಣಾರ್ಭಟಕ್ಕೆ ನದಿ, ಜಲಾಶಯಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಮಹಾಮಳೆ ಅಬ್ಬರಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ತುಂಗಭದ್ರಾ ನದಿಯ ಪ್ರವಾಹಕ್ಕೆ ಅರ್ಚಕರೊಬ್ಬರು ಕೊಚ್ಚಿ ಹೋದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ತುಂಗಭದ್ರಾ ನದಿ ದಡದಲ್ಲಿರುವ ಕರಿವೀರೇಶ್ವರ ದೇವಸ್ಥಾನದ ಅರ್ಚಕರು ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.

ಲಿಂಗಪ್ಪ ಪೂಜಾರ (52) ನೀರು ಪಾಲಾದ ಅರ್ಚಕರು. ಕರಿವೀರೇಶ್ವರ ದೇವಸ್ಥಾನಕ್ಕೆ ಪೂಜೆಗೆಂದು ಬಂದ ಅರ್ಚಕರು ಸ್ನಾನಕ್ಕೆಂದು ತುಂಗಭದ್ರಾ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಅರ್ಚಕರು ಕೊಚ್ಚಿ ಹೋಗಿದ್ದಾರೆ.

ಸ್ಥಳಕ್ಕೆ ಸಿಂಧನೂರು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ನದಿಯಲ್ಲಿ ಅರ್ಚಕರಿಗಾಗಿ ಶೋಧ ನಡೆಸಿದ್ದಾರೆ.
ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button