
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರಿ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಇಂದು ಕೂಡ ಮತ್ತೆ ಭೂಕುಸಿತವುಂಟಾಗಿದ್ದು, ಮುಂದಿನ ಆದೇಶದವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುತ್ತಿದ್ದ ಶಿರಾಡಿಘಾಟ್ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದೋಣಿಗಲ್ ಬಳಿ ನಿನ್ನೆ ಭೂಕುಸಿತವಾಗಿತ್ತು. ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಇದೇ ಮಾರ್ಗದಲ್ಲಿ ಮತ್ತೆ ಭಾರಿ ಪ್ರಮಾಣದಲ್ಲಿ ಭೂಕುಸಿತವುಂಟಾಗಿದ್ದು, ಮುಂಜಾಗೃತಾ ಕ್ರಮವಾಗಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಬಗ್ಗೆ ಹಾಸನ ಎಸ್ ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಪರಿಹಾರ ಹಣವನ್ನು ಸಿದ್ದರಾಮಯ್ಯ ಕಾರಿನ ಮೇಲೆ ಬಿಸಾಕಿ ಮಹಿಳೆ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ