ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು ಸೇವಿಸಿದ ಕಿಚ್ಚ ಸುದೀಪ್ ಕೆಲ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.
ಆದೇಶ ವಾಪಸ್ ಗೆ ಮುಖ್ಯಮಂತ್ರಿಗಳು ನೀಡಿದ ಸ್ಪಷ್ಟೀಕರಣವೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ